Home ಟಾಪ್ ಸುದ್ದಿಗಳು ‘ರಾಷ್ಟ್ರಪತ್ನಿ’ ಹೇಳಿಕೆ ವಿವಾದ: ಅಧೀರ್ ರಂಜನ್ ವಿರುದ್ಧ ಎಫ್ ಐಆರ್ ದಾಖಲು

‘ರಾಷ್ಟ್ರಪತ್ನಿ’ ಹೇಳಿಕೆ ವಿವಾದ: ಅಧೀರ್ ರಂಜನ್ ವಿರುದ್ಧ ಎಫ್ ಐಆರ್ ದಾಖಲು

ದಿಂಡೋರಿ : ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರನ್ನು ‘ರಾಷ್ಟ್ರಪತ್ನಿ’ ಎಂದು ಸಂಭೋದಿಸಿದ್ದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ ಮಧ್ಯಪ್ರದೇಶದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲು ದೆಹಲಿಯ ಸಂಸತ್ ಭವನದ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಮಾಜಿ ಸಂಸದ ಓಂ ಪ್ರಕಾಶ್ ಧುರ್ವೆ ಅವರು ಅಧೀರ್ ರಂಜನ್ ಚೌಧರಿ ವಿರುದ್ಧ ದೂರು ನೀಡಿದ್ದರು. ಅಧೀರ್ ರಂಜನ್ ಚೌಧರಿ ಅವರ ಹೇಳಿಕೆಯು ಆದಿವಾಸಿಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

‘ರಾಷ್ಟ್ರಪತ್ನಿ’ ಹೇಳಿಕೆಗೆ ಕಾಂಗ್ರೆಸ್ ನಾಯಕ ಈಗಾಗಲೇ  ಕ್ಷಮೆಯಾಚಿಸಿದ್ದಾರೆ.

Join Whatsapp
Exit mobile version