ಜಾತಿನಿಂದನೆ: ಬಿಜೆಪಿ ಶಾಸಕ ಬಿ.ಪಿ ಹರೀಶ್ ವಿರುದ್ಧ FIR​ ದಾಖಲು

Prasthutha|

ದಾವಣಗೆರೆ: ಜಾತಿನಿಂದನೆ ಆರೋಪದಡಿ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

- Advertisement -

ಮಾದಿಗ ಸಮುದಾಯಕ್ಕೆ ಬಿಜೆಪಿ ಸರ್ಕಾರ ಒಳಮೀಸಲಾತಿ ನೀಡಿದೆ. ಆದರೆ ಮಾದಿಗರು ಬಿಜೆಪಿಗೆ ಮತ ಹಾಕಿಲ್ಲವೆಂದು ಹರೀಶ್ ವಾಗ್ದಾಳಿ ಮಾಡಿದ್ದರು. ಇದೇ ಸಂದರ್ಭದಲ್ಲಿ ಆಕ್ಷೇಪಾರ್ಹ ಪದವನ್ನು ಬಳಸಿದ್ದರು. ಈ ಹೇಳಿಕೆಗೆ ಮಾದಿಗ ಸಮುದಾಯ ಆಕ್ರೋಶಗೊಂಡಿತ್ತು. ದಲಿತ ಮುಖಂಡರು ನೀಡಿದ ದೂರು ಹಿನ್ನೆಲೆ ಎಫ್​ಐಆರ್ ದಾಖಲಾಗಿದ್ದು, ಬಿ.ಪಿ.ಹರೀಶ್​​ ಬಂಧನ ಭೀತಿಯಲ್ಲಿದ್ದಾರೆ.

ಬಿ.ಪಿ.ಹರೀಶ್ ನೀಡಿದ್ದ ಅವಹೇಳನಕಾರಿ ಹೇಳಿಕೆ ವೈರಲ್ ಆಗಿತ್ತು. 7 ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಬಿ.ಪಿ.ಹರೀಶ್, 2 ಬಾರಿ ಗೆದಿದ್ದಾರೆ.

Join Whatsapp