ದಾವಣಗೆರೆ: ಜಾತಿನಿಂದನೆ ಆರೋಪದಡಿ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಾದಿಗ ಸಮುದಾಯಕ್ಕೆ ಬಿಜೆಪಿ ಸರ್ಕಾರ ಒಳಮೀಸಲಾತಿ ನೀಡಿದೆ. ಆದರೆ ಮಾದಿಗರು ಬಿಜೆಪಿಗೆ ಮತ ಹಾಕಿಲ್ಲವೆಂದು ಹರೀಶ್ ವಾಗ್ದಾಳಿ ಮಾಡಿದ್ದರು. ಇದೇ ಸಂದರ್ಭದಲ್ಲಿ ಆಕ್ಷೇಪಾರ್ಹ ಪದವನ್ನು ಬಳಸಿದ್ದರು. ಈ ಹೇಳಿಕೆಗೆ ಮಾದಿಗ ಸಮುದಾಯ ಆಕ್ರೋಶಗೊಂಡಿತ್ತು. ದಲಿತ ಮುಖಂಡರು ನೀಡಿದ ದೂರು ಹಿನ್ನೆಲೆ ಎಫ್ಐಆರ್ ದಾಖಲಾಗಿದ್ದು, ಬಿ.ಪಿ.ಹರೀಶ್ ಬಂಧನ ಭೀತಿಯಲ್ಲಿದ್ದಾರೆ.
ಬಿ.ಪಿ.ಹರೀಶ್ ನೀಡಿದ್ದ ಅವಹೇಳನಕಾರಿ ಹೇಳಿಕೆ ವೈರಲ್ ಆಗಿತ್ತು. 7 ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಬಿ.ಪಿ.ಹರೀಶ್, 2 ಬಾರಿ ಗೆದಿದ್ದಾರೆ.