ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ಮೇಲೆ FIR

Prasthutha|

ಮಂಗಳೂರು: ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.

- Advertisement -


ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ( BNS) 351(3), 353 ಸೆಕ್ಷನ್ ಅಡಿ ಎಫ್ ಐಆರ್ ದಾಖಲಾಗಿದೆ.

ಎಫ್ ಐಆರ್ ದಾಖಲಾಗಿರುವ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಮಾಹಿತಿ ನೀಡಿದ್ದಾರೆ.

Join Whatsapp