ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ವಿರುದ್ದ FIR ದಾಖಲು

Prasthutha|

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲಿಸಲಾಗಿದೆ.

- Advertisement -


ರಾಹುಲ್ ಗಾಂಧಿ ವಿರುದ್ಧ ಅಮಿತ್ ಮಾಳವಿಯಾ ಅವರು ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಇವರ ವಿರುದ್ಧ ಕ್ರಮಕೈಗೋಳ್ಳುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೈಗ್ರೌಂಡ್ಸ್ ಠಾಣೆಗೆ ಜೂನ್ 17ರಂದು ದೂರು ನೀಡಿದ್ದರು. ಇದರ ಆಧಾರದ ಮೇಲೆ ಇದೀಗ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ವೀಡಿಯೋ ಹರಿಬಿಟ್ಟ ಹಿನ್ನೆಲೆಯಲ್ಲಿ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಿಯಾಂಕ್ ಖರ್ಗೆ ದೂರು ನೀಡಿದ್ದರು. ಅದರಂತೆ ಇದೀಗ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಾಗಿದೆ