ಬೆಂಗಳೂರು: ‘ಮನದ ಕಡಲು’ ಸಿನಿಮಾದ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ನಿಧನರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಸೇರಿ ಚಿತ್ರತಂಡದ ಕೆಲವರ ಮೇಲೆ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದಿದ್ದರಿಂದ ‘ಮನದ ಕಡಲು’ ಚಿತ್ರದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ಮೇಲೆ ದೂರು ದಾಖಲಾಗಿದೆ.