Home ಟಾಪ್ ಸುದ್ದಿಗಳು ನಟಿ ರನ್ಯಾ ವಿರುದ್ಧ ಅಸಭ್ಯ ಪದ ಬಳಕೆ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR

ನಟಿ ರನ್ಯಾ ವಿರುದ್ಧ ಅಸಭ್ಯ ಪದ ಬಳಕೆ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR

0

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ನಟಿ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಸಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ವೈದ್ಯೆ ಅಕುಲಾ ಅನುರಾಧ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ವಿವರ: ಮಾರ್ಚ್ 17ರಂದು ವಿಜಯಪುರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಯತ್ನಾಳ್, ರನ್ಯಾ ರಾವ್ ಯಾರ ಜೊತೆ ಸಂಬಂಧ ಹೊಂದಿದ್ದಾರೆ, ಎಲ್ಲಿಂದ ಚಿನ್ನ ತಂದಿದ್ದಾರೆ ಎಂಬ ಮಾಹಿತಿ ಪಡೆದಿದ್ದೇನೆ. ಅಲ್ಲದೇ, ಅವರು ಎಲ್ಲೆಲ್ಲಿ ಚಿನ್ನ ಇರಿಸಿಕೊಂಡು ಬಂದಿದ್ದಾರೆ ಎನ್ನುವ ಮೂಲಕ ಅಶ್ಲೀಲ ಪದ ಬಳಸಿದ್ದಾರೆ. ಇದು ರನ್ಯಾ ರಾವ್‌ ಗೌರವಕ್ಕೆೆ ಧಕ್ಕೆೆ ತಂದಿದೆ. ಕನ್ನಡ, ತಮಿಳು, ತೆಲುಗು ಭಾಷೆಯ ಚಿತ್ರಗಳಲ್ಲಿ ನಟಿಸಿರುವ ನಟಿಯ ಗೌರವ ಮತ್ತು ಚಾರಿತ್ರ್ಯಕ್ಕೆೆ ಧಕ್ಕೆೆ ಬರುವ ರೀತಿಯಲ್ಲಿ ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಕುಲಾ ಅನುರಾಧ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version