Home ಟಾಪ್ ಸುದ್ದಿಗಳು ಲೈಂಗಿಕ ಕಿರುಕುಳ ಆರೋಪ: ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ಧ FIR ದಾಖಲು

ಲೈಂಗಿಕ ಕಿರುಕುಳ ಆರೋಪ: ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ಧ FIR ದಾಖಲು

ಚಿತ್ರದುರ್ಗ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಅರೋಪದಡಿ ಮುರುಘಾ ಮಠದ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.


ಆಡಳಿತಾಧಿಕಾರಿ ಬಸವರಾಜನ್ ಅವರು ಪರಿಶೀಲನೆ ನೆಪದಲ್ಲಿ ಕೊಠಡಿಗೆ ಪ್ರವೇಶಿಸಿ ಕಿರುಕುಳ ನೀಡುತ್ತಿದ್ದರು. ದೇಹದ ಅಂಗಾಂಗಗಳನ್ನು ಮುಟ್ಟಿ ಹಿಂಸೆ ನೀಡುತ್ತಿದ್ದರು. ಬಲತ್ಕಾರಕ್ಕೆ ಯತ್ನಿಸಿದಾಗ ಪ್ರತಿರೋಧ ತೋರಲಾಯಿತು. ಇದರಿಂದ ಕುಪಿತಗೊಂಡ ಅವರು ಕೊಲೆ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಮಹಿಳೆ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿನಿಯರಿಬ್ಬರನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದರು. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

Join Whatsapp
Exit mobile version