ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ FIR ದಾಖಲು

Prasthutha|

ಮುಂಬೈ: ‘ಸನಾತನ ಧರ್ಮ’ದ ಕುರಿತು ನೀಡಿದ ಹೇಳಿಕೆಗೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

- Advertisement -

ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153ಎ ಮತ್ತು 295ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಈ ಹಿಂದೆ ಚೆನ್ನೈನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ತಮಿಳುನಾಡಿನ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಉದಯನಿಧಿ ಅವರು ಸನಾತನ ಧರ್ಮದ ವಿರುದ್ಧ ವಾಗ್ದಾಳಿ ನಡೆಸಿದರು. ಸನಾತನ ಧರ್ಮ ಎನ್ನುವುದು “ಡೆಂಗ್ಯೂ, ಮಲೇರಿಯಾ, ಜ್ವರ ಮತ್ತು ಕರೋನಾ” ಇದ್ದಂತೆ ಅದನ್ನು ಕೇವಲ ವಿರೋಧಿಸಬಾರದು, ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿದರು.

Join Whatsapp