ಅರಣ್ಯಾಧಿಕಾರಿಗೆ ‘ಲೋಫರ್ ನನ್ಮಗ’ ಎಂದು ನಿಂದಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು

Prasthutha|

ಬೆಳ್ತಂಗಡಿ: ಕರ್ತವ್ಯ ನಿರತ ವಲಯ ಅರಣ್ಯಾಧಿಕಾರಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನ ಅನ್ವಯ ಶಾಸಕ ಹರೀಶ್ ಪೂಂಜಾ ವಿರುದ್ಧ ಐಪಿಸಿ 1860(U/s -143,353,504,149) ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ. 7ರಿಂದ 9ರ ವರೆಗೆ ಕೊಕ್ಕಡ ಹೋಬಳಿಯ ಕಳೆಂಜ ಗ್ರಾಮದ ಅಮ್ಮಿನಡ್ಕದ ಮೀಸಲು ಅರಣ್ಯದಲ್ಲಿ ಅಲ್ಲಿನ ನಿವಾಸಿ ಲೋಲಾಕ್ಷ ಗೌಡ ಕಟ್ಟಡ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದರು. ಈ ಅತಿಕ್ರಮಣ ತೆರವುಗೊಳಿಸಲು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಹಾಗೂ ಸಿಬಂದಿ ವಿಚಾರಣೆ ನಡೆಸುತ್ತಿರುವಾಗ ಶಾಸಕ ಹರೀಶ್ ಪೂಂಜ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಕರೆ ಮಾಡಿ ಒತ್ತಡ ಹೇರಿದ್ದಾರೆ ಎಂದು ಆರೋಪಿಸಲಾಗಿದೆ.
ಜೊತೆಗೆ ಸಾರ್ವಜನಿಕವಾಗಿ ಅರಣ್ಯ ಸಿಬಂದಿ ಮೇಲೆ ಸುಳ್ಳು ಆರೋಪ ಹೊರಿಸಿ ಮಾನ ಹಾನಿ ಮಾಡಿದ್ದಾರೆ ಎಂದು ಆರೋಪಿಸಿರುವ ಸಂಘವು ಶಾಸಕ ಹರೀಶ್ ಪೂಂಜ ಹಾಗೂ ಮತ್ತಿತರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

Join Whatsapp