Home ಟಾಪ್ ಸುದ್ದಿಗಳು ʼಟಾಕ್ಸಿಕ್ʼ ಸಿನಿಮಾಕ್ಕಾಗಿ ಮರ ಕಡಿದ ಆರೋಪ: FIR ದಾಖಲು

ʼಟಾಕ್ಸಿಕ್ʼ ಸಿನಿಮಾಕ್ಕಾಗಿ ಮರ ಕಡಿದ ಆರೋಪ: FIR ದಾಖಲು

ಬೆಂಗಳೂರು: ಯಶ್‌ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‍ಗೆ ಮರಗಳನ್ನು ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ.

ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಇತ್ತೀಚೆಗೆ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ತಂಡ ಬೆಂಗಳೂರಿನ ಹೊರವಲಯದಲ್ಲಿ ಚಿತ್ರೀಕರಣಕ್ಕೆ ಸೆಟ್ ಹಾಕಿತ್ತು. ಸೆಟ್​​ ಹಾಕಲು ಸಾಕಷ್ಟು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಸಚಿವರು ಹೇಳಿದ್ದರು.
ಈ ಬಗ್ಗೆ ಹೆಚ್​ಎಂಟಿ ಇದು ತಮ್ಮ ಜಾಗ ಅಲ್ಲ ಈ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ ಎಂದು ಎಚ್​​ಎಂಟಿ ಎಂದು ಸ್ಪಷ್ಟನೆ ನೀಡಿತ್ತು.

Join Whatsapp
Exit mobile version