Home ಟಾಪ್ ಸುದ್ದಿಗಳು ನಟ ಚೇತನ್ ವಿರುದ್ಧ FIR ದಾಖಲು

ನಟ ಚೇತನ್ ವಿರುದ್ಧ FIR ದಾಖಲು

ಬೆಂಗಳೂರು : ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ನಟ ಚೇತನ್ ಬ್ರಾಹ್ಮಣರನ್ನು ಭಯೋತ್ಪಾದಕರು ಎಂದು ಹೇಳಿದ್ದರೆಂದು ಮತ್ತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿದ್ದಾರೆ ಎಂದು ಆರೋಪವಿದ್ದು, ಹೀಗಾಗಿ ವಿಪ್ರ ಯುವ ವೇದಿಕೆ ಬಸವಗುಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದು,. ಪೊಲೀಸರು ಐಪಿಸಿ 153 (B) 295 (A) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Join Whatsapp
Exit mobile version