Home ಟಾಪ್ ಸುದ್ದಿಗಳು ಸಿ.ಟಿ.ರವಿ ವಿರುದ್ಧ FIR ದಾಖಲು

ಸಿ.ಟಿ.ರವಿ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.


ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ ನೋಡಲ್ ಅಧಿಕಾರಿಯ ಸೂಚನೆ ಮೇರೆಗೆ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ನಗರ ಠಾಣೆಗೆ ದೂರು ನೀಡಿ ಎಫ್ಐಆರ್ ದಾಖಲಿಸಿದ್ದಾರೆ.


ಸಿ.ಟಿ.ರವಿ ತಮ್ಮ ಎಕ್ಸ್ ಖಾತೆಯಲ್ಲಿ ‘ಸಾಗರಗಳ ಆಳವನ್ನು ಅಳೆಯಬಹುದು. ಹಿಂದೂ ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿ ದ್ವೇಷವನ್ನು ಎಂದಿಗೂ ಕಂಡು ಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Join Whatsapp
Exit mobile version