ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲು

Prasthutha|

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ R.R.ನಗರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

- Advertisement -

ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲು ಮಾಡಿದ್ದರು. ದೂರಿನ ಮೇರೆಗೆ ಇದೀಗ ಎಫ್​ಐಆರ್ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಜೊತೆಗೆ ಹುಣಸೆಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು ಜಿಲೆಟಿನ್​ ಸ್ಫೋಟ ಮಾಡಿದ ಆರೋಪ ಕೇಳಿಬಂದಿತ್ತು.

ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದ ಹುಣಸೆಮಾರನಹಳ್ಳಿ ಗ್ರಾಮಸ್ಥರು

- Advertisement -

ಇನ್ನು ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಅವರು ದೂರು ದಾಖಲು ಮಾಡಿದ್ದರು. ಹುಣಸಮಾರನಹಳ್ಳಿ ಸರ್ವೆ ನಂಬರ್ 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

Join Whatsapp