ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ಕು ಮಕ್ಕಳ ಮೃತ್ಯು

Prasthutha|

ಹೊಸದಿಲ್ಲಿ: ಐಸಿಯು ವಿಭಾಗದಲ್ಲಿ ತಡ ರಾತ್ರಿ ಅಗ್ನಿ ದುರಂತ ಸಂಭವಿಸಿದ್ದು, ನಾಲ್ಕು ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಕಮಲಾ ನೆಹರು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

- Advertisement -

ಆಸ್ಪತ್ರೆಯಲ್ಲಿ ದುರಂತ ಸಂಭವಿಸುವ ವೇಳೆ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಾಲ್ಕು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇದು ಅತ್ಯಂತ ನೋವಿನ ಸಂಗತಿ ಎಂದಿದ್ದಾರೆ.



Join Whatsapp