ಪ್ರಧಾನಿ ಮೋದಿ ತವರು ರಾಜ್ಯ ಗುಜರಾತ್ ನ ಕೋವಿಡ್ 19 ಆಸ್ಪತ್ರೆಯಲ್ಲಿ ಅಗ್ನಿ ದುರಂತ | ಐವರು ರೋಗಿಗಳು ಸಾವು

Prasthutha|

ರಾಜ್ ಕೋಟ್ : ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನ ಕೋವಿಡ್ 19 ಆಸ್ಪತ್ರೆಯೊಂದರಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಐವರು ಸಾವಿಗೀಡಾಗಿದ್ದಾರೆ.

- Advertisement -

ಗುಜರಾತ್ ನ ರಾಜ್ ಕೋಟ್ ನಗರ ಮಾವ್ಡಿ ಪ್ರದೇಶದ ಕೋವಿಡ್ 19 ಆಸ್ಪತ್ರೆಯಲ್ಲಿ ಇಂದು ನಸುಕಿನ ಜಾವ ಬೆಂಕಿ ಅವಘಡ ಉಂಟಾಗಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದುರ್ಘಟನೆ ಸಂಭವಿಸಿದೆ.

ದುರ್ಘಟನೆಯ ವೇಳೆ ಐಸಿಯುನಲ್ಲಿ 11 ಮಂದಿ ರೋಗಿಗಳಿದ್ದು, ಅವರಲ್ಲಿ ಆರು ಮಂದಿಯನ್ನು ರಕ್ಷಿಸಲಾಗಿದೆ. ಉಳಿದ ಐವರು ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ 33 ಮಂದಿ ಕೋವಿಡ್ 19 ಚಿಕಿತ್ಸೆಗಾಗಿ ದಾಖಲಾಗಿದ್ದರು.



Join Whatsapp