ಭುವನೇಶ್ವರ್: ದಲಿತರು ವಾಸಿಸುತ್ತಿದ್ದ ಹುಲ್ಲುವಾವಲು ಭೂಮಿಯಲ್ಲಿದ್ದ ಗುಡಿಸಲುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು 20ಕ್ಕೂ ಅಧಿಕ ಗುಡಿಸಲುಗಳು ಬೆಂಕಿಗಾಹುತಿಯಾಗಿ 10 ಮಂದಿ ಗಾಯಗೊಂಡಿರುವ ಘಟನೆ ಒರಿಸ್ಸಾದ ಬ್ರಹ್ಮಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭಾನುವಾರ ಬ್ರಹ್ಮಗಿರಿಯ ಸತಪಾದದ ನಾಥಪುರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.
ಈ ವೇಳೆ ಎರಡೂ ಗುಂಪಿನವರು ಪರಸ್ಪರ ಬಾಂಬುಗಳನ್ನು ಎಸೆದಿದ್ದು, ಇದರಿಂದ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ, 20 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ‘ಒರಿಸ್ಸಾ ಪೋಸ್ಟ್’ ವರದಿ ಮಾಡಿದೆ. ಘಟನೆ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊಗಳು ವೈರಲ್ ಆಗಿವೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.