ಗುಜರಾತ್‌ನ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ | 18 ಮಂದಿ ಸಜೀವ ದಹನ!

Prasthutha|

ಭಾರತದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಇಡೀ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಗುಜರಾತ್ ನ ಬರೂಚ್ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡದಲ್ಲಿ 16ಮಂದಿ ಕೊರೋನಾ ಪೀಡಿತರು ಸೇರಿದಂತೆ 18 ಮಂದಿ ಸಜೀವ ದಹನವಾಗಿದ್ದಾರೆ.

ಸುಮಾರು 50 ರೋಗಿಗಳಿದ್ದ ನಾಲ್ಕು ಮಹಡಿಯ ವೆಲ್ಫೇರ್ ಆಸ್ಪತ್ರೆಯಲ್ಲಿ ಬೆಡ್ ಗಳಲ್ಲಿ ರೋಗಿಗಳು ಸಜೀವ ದಹನವಾಗಿರುವ ದೃಶ್ಯಗಳು ಕರುಣಾಜನಕವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಇತರ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ ಎನ್ನಲಾಗಿದೆ. ಬೆಂಕಿ ದುರಂತಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಈ ದುರ್ಘಟನೆಯಲ್ಲಿ ಇಬ್ಬರು ದಾದಿಯರೂ ಬಲಿಯಾಗಿದ್ದಾರೆ.

- Advertisement -

ಇತ್ತಿಚೆಗೆ ಆಸ್ಪತ್ರೆಗಳಲ್ಲಿ ಬೆಂಕಿ ಅವಘಡ ಪ್ರಕರಣಗಳು ವರದಿಯಾಗುತ್ತಲೇ ಇದ್ದು, ಕೆಲ ದಿನಗಳ ಹಿಂದೆ ಮುಂಬೈನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು.

- Advertisement -