ಅಮೃತಸರ: ದೆಹಲಿಯಲ್ಲಿ ಅಗ್ನಿ ದುರಂತ ಸಂಭವಿಸಿ 27 ಮಂದಿ ಸಾವನ್ನಪ್ಪಿದ ಸುದ್ದಿ ಜನಮಾನಸದಿಂದ ಮಾಸುವ ಮುನ್ನವೇ ಪಂಜಾಜ್ ನ ಅಮೃತಸರದ ಗುರು ನಾನಕ್ ದೇವ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಮೊದಲು ಕಾಣಿಸಿಕೊಂಡಿದೆ. ಸ್ಥಳಕ್ಕೆ 8ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ಈಗ ಬೆಂಕಿ ನಿಯಂತ್ರಣದಲ್ಲಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಲವ್ ಪ್ರೀತ್ ಸಿಂಗ್ ತಿಳಿಸಿದ್ದಾರೆ.