ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ

Prasthutha|

ಬೆಂಗಳೂರು: ನಗರದ ಬ್ಯಾಟರಾಯನಪುರ ಬಿಬಿಎಂಪಿ ಕಚೇರಿಯ 3ನೇ ಮಹಡಿಯಲ್ಲಿರುವ ಮುಖ್ಯ ಎಸಿ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ.

- Advertisement -

ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು ಯಲಹಂಕ ವಲಯದ ಇಂಜಿನಿಯರ್ ರಂಗನಾಥ್ ಕಚೇರಿಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಉಂಟಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.

- Advertisement -

ಘಟನೆಯಿಂದ ಯಾವುದೇ ದಾಖಲೆಗೆ ಹಾನಿಯಾಗಿಲ್ಲ. ಆದರೆ, ಕೆಲ ಪಿಟೋಪಕರಣ ಹಾಗೂ ಟಿವಿ, ಖುರ್ಚಿ, ಪತ್ರಗಳು ಬೆಂಕಿಗಾಹುತಿಯಾಗಿವೆ.ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp