ಬೆಂಗಳೂರು: ನಗರದ ಬ್ಯಾಟರಾಯನಪುರ ಬಿಬಿಎಂಪಿ ಕಚೇರಿಯ 3ನೇ ಮಹಡಿಯಲ್ಲಿರುವ ಮುಖ್ಯ ಎಸಿ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ.
ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು ಯಲಹಂಕ ವಲಯದ ಇಂಜಿನಿಯರ್ ರಂಗನಾಥ್ ಕಚೇರಿಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಉಂಟಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.
ಘಟನೆಯಿಂದ ಯಾವುದೇ ದಾಖಲೆಗೆ ಹಾನಿಯಾಗಿಲ್ಲ. ಆದರೆ, ಕೆಲ ಪಿಟೋಪಕರಣ ಹಾಗೂ ಟಿವಿ, ಖುರ್ಚಿ, ಪತ್ರಗಳು ಬೆಂಕಿಗಾಹುತಿಯಾಗಿವೆ.ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.