ಚಿಕ್ಕಮಗಳೂರು: ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ, 5 ಲಕ್ಷ ಹಣ ಭಸ್ಮ

Prasthutha|

ಚಿಕ್ಕಮಗಳೂರು: ನಗರದ ಸಾರಗೋಡು ಆರ್ಕೆಡ್​ನಲ್ಲಿರುವ ಎಟಿಎಂಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ.

- Advertisement -

ಶಾರ್ಟ್ ಸರ್ಕ್ಯೂಟ್​ ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್​ ಅಗ್ನಿಶಾಮಕ ದಳಕ್ಕೆ ತಿಳಿಸಿದೆ. ಮಾಹಿತಿ ಬಂದ ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp