ಮಂಗಳೂರು | ಎಲೆಕ್ಟ್ರಿಕ್ ಶೋರೂಮ್ ನಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಬೈಕ್ ಗಳು ಬೆಂಕಿಗಾಹುತಿ!

Prasthutha|

ಮಂಗಳೂರು: ಪಡೀಲ್ ಬಳಿಯ “ಒಕಿನಾವ” ಶೂರೂಮ್‌ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿದೆ.

- Advertisement -


ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ಶೋರೂಮ್ ನಲ್ಲಿ ಹೊಗೆ ಕಾಣಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.


ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗ ಬೆಂಕಿ ನಂದಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp