ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಇಬ್ಬರು ಸಾವು, ಹಲವರಿಗೆ ಗಾಯ

Prasthutha|

ಹೊಸದಿಲ್ಲಿ: ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ದೆಹಲಿಯ ನರೆಲಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

- Advertisement -

ಮೃತರ ಗುರುತು ಪತ್ತೆಹಚ್ಚಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕಾರ್ಖಾನೆಯೊಳಗೆ ಸಿಲುಕಿಕೊಂಡವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Join Whatsapp