ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ

Prasthutha|

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ.

- Advertisement -


ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ.


ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Join Whatsapp