Home ಟಾಪ್ ಸುದ್ದಿಗಳು ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಬೆಂಕಿ ಆಕಸ್ಮಿಕ: ಹೊತ್ತಿ ಉರಿದ ಮರಗಳು

ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಬೆಂಕಿ ಆಕಸ್ಮಿಕ: ಹೊತ್ತಿ ಉರಿದ ಮರಗಳು

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಿಗೆ ಆತಂಕವನ್ನುಂಟು ಮಾಡಿದೆ.


ಗೋಕುಲ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಿಲ್ದಾಣದ ಗೇಟ್ ಪಕ್ಕದ ಕಾಂಪೌಂಡ್ ಬಳಿ ಬೆಂಕಿ ಆವರಿಸಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಆಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Join Whatsapp
Exit mobile version