ದೆಹಲಿಯ ಆದಾಯ ತೆರಿಗೆ ಕಚೇರಿಯಲ್ಲಿ ಅಗ್ನಿ ಅವಘಡ

Prasthutha|

ನವದೆಹಲಿ: ಕೇಂದ್ರ ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ. ಸದ್ಯದ ಮಾಹಿತಿ ಪ್ರಕಾರ ಆದಾಯ ತೆರಿಗೆ ಕಚೇರಿಯ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಅವಘಡಕ್ಕೆ ಕಾರಣ ಏನೆಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

- Advertisement -


ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಿಯಂತ್ರಿಸಲು 21 ಅಗ್ನಿಶಾಮಕ ಟೆಂಡರ್ಗಳೊಂದಿಗೆ ಸ್ಥಳಕ್ಕೆ ಧಾವಿಸಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಇಲಾಖೆ ತಿಳಿಸಿದೆ.


ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ ನೌಕರರನ್ನು ತಕ್ಷಣವೇ ಸ್ಥಳಾಂತರಿಸಲಾಗುತ್ತಿದೆ. ಅಗ್ನಿಶಾಮಕ ಕಾರ್ಯಾಚರಣೆಯನ್ನು ಸುಲಭಗೊಳಿಸಲು ಕಟ್ಟಡದ ಸುತ್ತಲಿನ ಪ್ರದೇಶವನ್ನು ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ ಎಂದು ಅಗ್ನಿಶಾಮಕ ದಳದವರು ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಜವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.



Join Whatsapp