ಮದುವೆ ಸಮಾರಂಭದಲ್ಲಿ ಬೆಂಕಿ ಅವಘಡ: 14 ಮಂದಿ ಸಾವು

Prasthutha|

ರಾಂಚಿ: ಮದುವೆ ಸಮಾರಂಭದಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಜಾರ್ಖಂಡ್ ನ ಧನ್ ಬಾದ್ ನಲ್ಲಿ ನಡೆದಿದೆ.

- Advertisement -


ಅಪಾರ್ಟ್ಮೆಂಟ್ ನಲ್ಲಿ ಮದುವೆ ಸಮಾರಂಭವೊಂದು ನೆರವೇರುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿ ದುರಂತಕ್ಕೆ 10 ಮಹಿಳೆಯರು, 3 ಮಕ್ಕಳು ಸೇರಿ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಯಾವ ಕಾರಣದಿಂದ ಬೆಂಕಿ ಆಕಸ್ಮಿಕ ಉಂಟಾಗಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಬೆಂಕಿಯನ್ನು ನಂದಿಸಿ, ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp