ಬೆಂಗಳೂರಲ್ಲಿ ಅಗ್ನಿ ಅವಘಡ: ಮನೆ, ಗುಜರಿ ಅಂಗಡಿ ಸೇರಿ ವಾಹನಗಳು ಬೆಂಕಿಗಾಹುತಿ

Prasthutha|

ಬೆಂಗಳೂರು: ವಿದ್ಯುತ್ ಟ್ರಾನ್ಸ್ ಫಾರ್ಮರ್ ಸ್ಫೋಟದಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಗುಜುರಿ ಅಂಗಡಿ ಹಾಗೂ ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾದ ಘಟನೆ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯ ಲಗ್ಗೆರೆಯಲ್ಲಿ ನಡೆದಿದೆ.

- Advertisement -


ವಿಷಯ ತಿಳಿದು ಕೂಡಲೇ ಅಗ್ನಿಶಾಮಕ ದಾಳ ಘಟನಾ ಸ್ಥಳಕ್ಕೆ ಆಗಮಿಸಿದ್ದು, ಎರಡು ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.


ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿರುವ ಪರಿಣಾಮ ಪಕ್ಕದಲ್ಲಿದ್ದ ಗುಜರಿ ಅಂಗಡಿಗೆ ಬೆಂಕಿ ತಗುಲಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.



Join Whatsapp