ಗುವಾಹಟಿಯಲ್ಲಿ ಬೆಂಕಿ ಅವಘಡ: ಹಲವು ಮನೆಗಳು ಭಸ್ಮ

Prasthutha|

ಗುವಾಹಟಿ: ಅಸ್ಸಾಂನ ಗುವಾಹಟಿಯ ಫಟಾಸಿಲ್ ಅಂಬಾರಿ ಪ್ರದೇಶದ ಕೊಳಗೇರಿ ಕಾಲೋನಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಅನೇಕ ಮನೆಗಳು ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗಳು ನಷ್ಟಗೊಂಡಿವೆ.

- Advertisement -

ಹಲವಾರು ಸಿಲಿಂಡರ್ ಗಳು ಸ್ಫೋಟಗೊಂಡಿದ್ದು, ಯಾವುದೇ ಸಾವುನೋವಿನ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp