ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ

Prasthutha|

ಶಿವಮೊಗ್ಗ: ಆಕಸ್ಮಿಕ ಬೆಂಕಿ ಅವಘಡದಲ್ಲಿ ಹುಲ್ಲಿನ ಬಣವೆಯೊಂದು ಸಂಪೂರ್ಣ ನಾಶವಾದ ಘಟನೆ ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ ನಡೆದಿದೆ.

- Advertisement -

ದೊಣಬಘಟ್ಟ ಗ್ರಾಮದ ನಿವಾಸಿ ನಾಸೀರ್ ಎಂಬವರ ಜಮೀನಿನ ಕಣದಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

Join Whatsapp