ಬೆಂಕಿ ಬಿದ್ದು ಗುಡಿಸಲು ಭಸ್ಮ; ಓರ್ವ ಸಾವು

Prasthutha|

ಬೀದರ್: ಮಧ್ಯರಾತ್ರಿವರೆಗೆ ಪಾರ್ಟಿ ಮಾಡಿದ ನಂತರ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಬಿದ್ದು ಓರ್ವ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದಲ್ಲಿ ನಡೆದಿದೆ.

- Advertisement -

ಹರನಾಳದ ಜಗನ್ನಾಥ ಹಲಗೆ (60) ಮೃತಪಟ್ಟ ವ್ಯಕ್ತಿ. ಜಗನ್ನಾಥ ಹಲಗೆ ಹಾಗೂ ಮಾರುತಿ ಗೊರನೆ ಎಂಬ ಇಬ್ಬರು ನಿನ್ನೆ ತಡರಾತ್ರಿವರೆಗೆ ಪಾರ್ಟಿ ಮಾಡಿ ನಿದ್ದೆಗೆ ಜಾರಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಜಗನ್ನಾಥನನ್ನು ರಕ್ಷಿಸಲು ಮುಂದಾಗಿದ್ದ ಮಾರುತಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಜಗನ್ನಾಥ ಹಲಗೆ ಸಾವಿನ ಸುದ್ದಿ ತಿಳಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಜೋಳ ಕಾಯಲು ಜಮೀನಿನಲ್ಲಿ ಪುಟ್ಟ ಗುಡಿಸಲು ನಿರ್ಮಿಸಿಕೊಂಡಿದ್ದರು. ಈ ಗುಡಿಸಲಿನಲ್ಲಿ ರಾತ್ರಿ ಪಾರ್ಟಿ ಮಾಡಿ ಜಗನ್ನಾಥ ಮತ್ತು ಮಾರುತಿ ಇಬ್ಬರು ನಿದ್ದೆಗೆ ಜಾರಿದ್ದಾರೆ. ಈ ವೇಳೆ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ದುರ್ಘಟನೆ ಸಂಭವಿಸಿದೆ.

- Advertisement -

ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಭಾಲ್ಕಿ ತಾಲೂಕಿನ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Join Whatsapp