ವಿದ್ಯುತ್ ಶಾರ್ಟ್ ಸರ್ಕ್ಯೂಟ್‌‌ನಿಂದ ಬೆಂಕಿ: ನಾಲ್ವರು ಮಕ್ಕಳು ಮೃತ್ಯು

Prasthutha|

ಮೀರತ್‌: ಯುಪಿಯ ಮೀರತ್‌’ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌’ನಿಂದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಮಕ್ಕಳು ಮೃತರಾಗಿದ್ದಾರೆ.

- Advertisement -

ಮನೆಯಲ್ಲಿದ್ದ ಪತಿ, ಪತ್ನಿ ಹಾಗೂ ನಾಲ್ವರು ಮಕ್ಕಳಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ವೇಳೆ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಪಲ್ಲವಪುರಂ ಪ್ರದೇಶದ ಮನೆಯೊಂದರಲ್ಲಿ ಮೊಬೈಲ್ ಜಾರ್ಜ್’ಗೆ ಹಾಕುವಾಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಮಾಹಿತಿ ಪಡೆದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ ಅವಘಡ ಸಂಭವಿಸಿರುವುದು ಪತ್ತೆಯಾಗಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಲಾಗುತ್ತಿದ್ದಾರೆ.



Join Whatsapp