ಬೆಂಗಳೂರಲ್ಲಿ ಅಮಿತ್ ಶಾ ಸಂಚರಿಸಿದ ರಸ್ತೆಯಲ್ಲಿ ಭಾರೀ ಶಬ್ದದೊಂದಿಗೆ ಬೆಂಕಿ

Prasthutha|

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಗರದ ಕಾರ್ಮೆಲ್ ಕಾಲೇಜು ಮುಂಭಾಗ ಸಂಚರಿಸುತ್ತಿದ್ದ ವೇಳೆ ಮೌಂಟ್ ಕಾರ್ಮೆಲ್ ರಸ್ತೆಯಲ್ಲಿ ಭಾರಿ ಶಬ್ದದೊಂದಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು.

- Advertisement -

ಕೂಡಲೇ ಪರಿಶೀಲನೆ ನಡೆಸಿದಾಗ ಶಾರ್ಟ್ ಸರ್ಕ್ಯೂಟ್ ಆಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಪಪಡಿಸಿದ್ದಾರೆ.

ಎಚ್ ಎಎಲ್ ವಿಮಾನ ನಿಲ್ದಾಣದಿಂದ ಪ್ಯಾಲೇಸ್ ರಸ್ತೆಯಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮಕ್ಕೆ ಅಮಿತ್ ಶಾ ಆಗಮಿಸುತ್ತಿದ್ದರು. ಈ ಮಾರ್ಗದ ಮೌಂಟ್ ಕಾರ್ಮೆಲ್ ಕಾಲೇಜು ಬಳಿ ಈ ಅವಾಂತರ ನಡೆದಿದೆ. ಕೆಳಗೆ ಬಿದ್ದಿದ್ದ ಎಲೆಕ್ಟ್ರಿಕಲ್ ವೈರ್ ಮೇಲೆ ಕಾರು ಹಾದುಹೋದ ನಂತರ ಈ ದುರಂತ ಸಂಭವಿಸಿದೆ. ವೈರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಶಬ್ದದ ಜೊತೆ ಭಾರಿ ಹೊಗೆ ಕಾಣಿಸಿಕೊಂಡಿದೆ.

- Advertisement -

ಮೌಂಟ್ ಕಾರ್ಮೆಲ್ ಕಾಲೇಜು ಬಳಿ ಭಾರೀ ಶಬ್ಧದಿಂದಾಗಿ ಸ್ಥಳೀಯರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತರು, ಶಾರ್ಟ್ ಸರ್ಕ್ಯೂಟ್ ನಿಂದ ಎಲೆಕ್ಟ್ರಿಕಲ್ ವೈರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಬಂದಿದೆ. ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದು ಆತಂಕ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Join Whatsapp