Home ಟಾಪ್ ಸುದ್ದಿಗಳು ಮುಂಬೈನ 7 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ : ಅಗ್ನಿಶಾಮಕ ಸಿಬ್ಬಂದಿಗೆ ಗಂಭೀರ ಗಾಯ

ಮುಂಬೈನ 7 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ : ಅಗ್ನಿಶಾಮಕ ಸಿಬ್ಬಂದಿಗೆ ಗಂಭೀರ ಗಾಯ

ಮುಂಬೈ: ಮುಂಬೈನ ಉಪನಗರ ಬೊರಿವಲಿಯಲ್ಲಿರುವ ಏಳು ಅಂತಸ್ತಿತ ವಸತಿ ಕಟ್ಟಡದ ಮೇಲಿನ ಮಹಡಿಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ವ್ಯಾಪಕ ನಾಶ ನಷ್ಟವಾಗಿದೆ. ಈ ಘಟನೆಯಲ್ಲಿ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿಯೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೊರಿವಲಿ ನಗರದ ಪಶ್ಚಿಮದಲ್ಲಿರುವ ಗಂಜವಾಲಾ ರೆಸಿಡೆನ್ಸಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿ ಜನರನ್ನು ರಕ್ಷಿಸಲು ಆರಂಭಿಸಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಾಥು ಸರ್ಜೇರಾಮ್ ಬಾಧಕ್ ಅಲ್ಲಿನ ನಿವಾಸಿಗಳನ್ನು ರಕ್ಷಣೆ ಮಾಡುವ ಸಂದರ್ಭದಲ್ಲಿ ಅವರಿಗೆ ಸುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.

ಈ ನಿಟ್ಟಿನಲ್ಲಿ ಅವರನ್ನು ಕಾಂಡಿವಲಿ ಶತಾಬ್ದಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸಕ್ತ ಸ್ಥಳೀಯ ನಿವಾಸಿಗಳು ಸುರಕ್ಷಿತವಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಂದ್ ಮಾಡಲಾಗಿರುವ ಕಚೇರಿಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆಯೆಂದು ಹೇಳಲಾಗುತ್ತಿದೆ.

Join Whatsapp
Exit mobile version