ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ನಾಲ್ವರ ಸಜೀವ ದಹನ !

Prasthutha|

ಮುಂಬೈ : ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ದುರಂತ ಸಂಭವಿಸಿ 15 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಘಟನೆ ನಡೆದು ವಾರ ಕಳೆಯುವ ಮುನ್ನವೇ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ದುರಂತ ಸಂಭವಿಸಿ ನಾಲ್ವರು ರೋಗಿಗಳು ಸಾವನ್ನಪ್ಪಿದ ಘಟನೆ ಬುಧವಾರ ಬೆಳಗ್ಗಿನ ಜಾವ ನಡೆದಿದೆ.

- Advertisement -

ಮುಂಬೈಯ ಕೌಸಾ ಬಳಿಯ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ 3.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆಗೆ ನಾಲ್ಕು ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರು ಇರಲಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಐಸಿಯುನಲ್ಲಿದ್ದ 6 ಮಂದಿ ಸೇರಿಂದಂತೆ 20 ರೋಗಿಗಳನ್ನು ತಕ್ಷಣ ಬೇರೆಡೆ ಸ್ಥಳಾಂತರಿಸಲಾಗಿದೆ. ಬೆಂಕಿ ಅವಘಡದಿಂದ ಕಟ್ಟಡದ ಮೊದಲ ಮಹಡಿ ಸುಟ್ಟುಹೋಗಿದ್ದು, ನಾಲ್ವರು ಸಜೀವ ದಹನಗೊಂಡಿದ್ದಾರೆ ಎಂದು ಸಚಿವ ಜಿತೇಂದ್ರ ಅವ್ಹಾದ್ ಮಾಹಿತಿ ನೀಡಿದ್ದಾರೆ.

- Advertisement -

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ. ದುರಂತದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಇದೇ ತಿಂಗಳ 23ರಂದು ಪಲ್ಗಾರ್ ಜಿಲ್ಲೆಯ ವಿರಾರ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ದುರಂತ ಸಂಭವಿಸಿದಿ 15 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದರು.



Join Whatsapp