ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್ ಎಂಬಲ್ಲಿ ಮೇಣದ ಬತ್ತಿ ತಯಾರಿಕಾ ಕಾರ್ಖಾನೆ ಇದ್ದು, ಇಂದು ಅದರಲ್ಲಿ ಬೆಂಕಿ ಅವಘಡ ಸಂಭವಿಸಿ 6 ಕಾರ್ಮಿಕರು ದಾರುಣವಾಗಿ ಮೃತರಾಗಿದ್ದಾರೆ. 8 ಮಂದಿ ಗಾಯಗೊಂಡಿದ್ದಾರೆ.
ಮಧ್ಯಾಹ್ನ 2.45 ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ ಆಗಿರೋದರ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಬಂದಿದೆ ಎಂದು ಪಿಂಪ್ರಿ-ಚಿಂಚ್‌ವಡ ಪುರಸಭೆಯ ಆಯುಕ್ತ ಶೇಖರ್ ಸಿಂಗ್ ತಿಳಿಸಿದ್ದಾರೆ.
ಸದ್ಯ ಬೆಂಕಿ ಹತೋಟಿಗೆ ಬಂದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಗಾಯಾಳುಗಳನ್ನು ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.
ಕಾರ್ಖಾನೆಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಬಳಸಲಾಗುವ ಮೇಣದ ಬತ್ತಿಗಳನ್ನು ತಯಾರಿಸಲಾಗುತ್ತದೆ.