ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುವ ವೇಳೆ ಅಗ್ನಿಶಾಮಕ ಸಿಬ್ಬಂದಿ ಆಯತಪ್ಪಿ ಬಿದ್ದ ದುರ್ಘಟನೆ ಮಾರತಹಳ್ಳಿಯ ಕಾರ್ತಿಕ್ ನಗರದ ಬಾಗಮನೆಯಲ್ಲಿ ನಡೆದಿದೆ.
ಕೆಳಗೆ ಬಿದ್ದ ಮಹದೇವಪುರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಿನಯ್ ಕೆಳಗೆ ಬಿದ್ದ ರಭಸಕ್ಕೆ ಕೈ, ಕಾಲು ಹಾಗೂ ತಲೆಗೆ ಗಾಯಗಾಳಾಗಿವೆ. ಅವರನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾರ್ಟ್ ಸರ್ಕಿಟ್’ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಲ್ಲಿ ಯಾವುದೇ ಸಾವು, ನೋವುಗಳು ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ 8 ಅಗ್ನಿಶಾಮಕ ವಾಹನಗಳು ತೆರಳಿ ಅಗ್ನಿ ನಂದಿಸುವ ಕಾರ್ಯ ನಡೆಸಿದರು.
ಹತ್ತು ಅಗ್ನಿಶಾಮಕ ವಾಹನಗಳ ಜೊತೆ ಲ್ಯಾಡರ್ ಬಳಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಮನೆ ಟೆಕ್ ಪಾರ್ಕ್ ನಲ್ಲಿರುವ ಲೊಗ್ಯಾಟೋ ಕಂಪನಿಯಲ್ಲಿ ಈ ಅಗ್ನಿ ಅವಘಡ ನಡೆದಿದೆ. 12 ಅಗ್ನಿಶಾಮಕ ವಾಹನದಿಂದ ಕಾರ್ಯಾಚರಣೆ ನಡೆಸಿ ಏರಿಯಲ್ ಲ್ಯಾಡರ್ ಮೂಲಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬೆಂಕಿಯಿಂದ ಕಂಪ್ಯೂಟರ್ ಗಳು ಸೇರಿ ಹಲವು ವಸ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಉಂಟಾಗಿದೆ ಮಾರತ್ ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.