ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ

Prasthutha|

ಡೆಹ್ರಾಡೂನ್ ಕಾನ್ಸ್ರೋ ಪ್ರದೇಶದ ಸಮೀಪ ಉತ್ತರಾಖಂಡದಲ್ಲಿ ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್‌ಪ್ರೆಸ್‌ನ ಕಂಪಾರ್ಟ್‌ಮೆಂಟ್‌ನಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ.

ರೈಲಿನಲ್ಲಿರುವ ಒಂದು ವಿಭಾಗದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಕೈಮೀರುವ ಮೊದಲು ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿದೆ ಎನ್ನಲಾಗಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಕಂಪಾರ್ಟ್‌ಮೆಂಟ್ ಸಂಖ್ಯೆ ಸಿ -4 ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

- Advertisement -

ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಮತ್ತು ಇಲ್ಲಿಯವರೆಗೆ ಯಾವುದೇ ಗಾಯಗಳು ವರದಿಯಾಗಿಲ್ಲ “ಎಂದು ಅಶೋಕ್ ಕುಮಾರ್ ಸುದ್ದಿಗಾರೊಂದಿಗೆ ಹೇಳಿದ್ದಾರೆ.

- Advertisement -