ಮಂಗಳೂರು: ಕೋವಿಡ್ ಸೋಂಕಿಗೆ ತುತ್ತಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಸಾವು

Prasthutha|

ಮಂಗಳೂರು: ಕದ್ರಿ ಅಗ್ನಿಶಾಮಕ ದಳ ಸಿಬ್ಬಂದಿಯೋರ್ವರು ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಕಳೆದ 23 ವರಷುಗಳಿಂದ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನವೀನ್(54) ಮೃತಪಟ್ಟವರಾಗಿದ್ದಾರೆ. ಇವರಿಗೆ ಇದೇ ತಿಂಗಳ 9ನೇ ತಾರೀಕಿನಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಅದೇ ದಿನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ನವೀನ್ ಅವರು, ನಿನ್ನೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

ಕದ್ರಿ ಅಗ್ನಿಶಾಮಕ ಠಾಣೆಯ ಏಳು ಮಂದಿ ಕೊರೊನಾ ಪಾಸಿಟಿವ್ ಒಳಗಾದ ಕಾರಣ ಕ್ವಾರೆಂಟೈನ್ ಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ತೌಖ್ತೆ ಚಂಡಮಾರುತ ಸಮಯದಲ್ಲಿ ಬಿಡುವಿಲ್ಲದೆ ಕಾರ್ಯಾಚರಣೆ ನಡೆಸಿದ್ದರಿಂದ ಸೋಂಕು ಹರಡಿದೆ ಎಂದು ಶಂಕಿಸಲಾಗಿದೆ.