ಪಟಾಕಿ ಕಾರ್ಖಾನೆ ಸ್ಫೋಟ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

Prasthutha|

ಮೇದಿನಿಪುರ: ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

- Advertisement -

ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ, ಹಲವು ಮಂದಿ ಗಾಯಗೊಂಡಿದ್ದಾರೆ. ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಘಟನೆಯ ತನಿಖೆಯನ್ನು ಪ್ರಾರಂಭಿಸಿದೆ.

ಪೂರ್ವ ಮೇದಿನಿಪುರ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ಕೆ, ಇಲ್ಲಿಯವರೆಗೆ, 9 ಮೃತದೇಹಗಳು ಪತ್ತೆಯಾಗಿವೆ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

Join Whatsapp