ಹೊಸದಿಲ್ಲಿ: ದಿಲ್ಲಿಯಲ್ಲಿ ಮುಂದಿನ ಜ.1ರ ವರೆಗೆ ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿ ದಿಲ್ಲಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಆನ್‌ಲೈನ್‌ನಲ್ಲಿ ಮಾರಾಟವಾಗುವ ಸೇರಿ ಎಲ್ಲ ರೀತಿ ಪಟಾಕಿಗಳಿಗೂ ಇದು ಅನ್ವಯಿಸುತ್ತದೆ. ಚಳಿಗಾಲ ಸಮೀಪಿಸುತ್ತಿದ್ದಂತೆ ದಿಲ್ಲಿಯಲ್ಲಿ ವಾಯು ಗುಣ ಮಟ್ಟ ಕುಸಿಯುವ ಕಾರಣ, ಮಾಲಿನ್ಯ ನಿಯಂತ್ರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪರಿಸರ ಸಚಿವ ಗೋಪಾಲ್ ರಾಯ್, ಹೆಚ್ಚುತ್ತಿರುವ ಮಾಲಿನ್ಯ ತಡೆಯಲು ಸರಕಾರ ಈ ನಿರ್ಧಾರ ಕೈಗೊಂಡಿದ್ದು ದೆಹಲಿ ನಿವಾಸಿಗಳು ಇದನ್ನು ಬೆಂಬಲಿಸಬೇಕು ಎಂದು ಕೋರಿದ್ದಾರೆ.