ಮೈಸೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಲಕ್ಷಾಂತರ ಮೌಲ್ಯದ ಪಟಾಕಿಗಳು ಬೆಂಕಿಗಾಹುತಿಯಾದ ಘಟನೆ ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಜೂಪಿಟರ್ ಪಟಾಕಿ ಅಂಗಡಿಯಲ್ಲಿ ನಡೆದಿದೆ.
ಪಟಾಕಿಗಳು ಸ್ಫೋಟಗೊಂಡ ಪರಿಣಾಮ ಸುಮಾರು 2 ಗಂಟೆಗಳ ಕಾಲ ಅಂಗಡಿ ಹೊತ್ತಿ ಉರಿದಿದ್ದು, ಅಂಗಡಿ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ. ಅಲ್ಲದೇ ಅಂಗಡಿಯ ಹೊರಾಂಗಣದಲ್ಲಿ ನಿಲ್ಲಿಸಿದ್ದ 2 ಕಾರುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.