ನವದೆಹಲಿ: ದೆಹಲಿಯ ಸಾಕೇತ್ ಕೋರ್ಟ್’ನಲ್ಲಿ ಮಹಿಳೆಯ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಗಂಭೀರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದುಷ್ಕರ್ಮಿಯೋರ್ವ ನಾಲ್ಕು ಸುತ್ತು ಗುಂಡು ಹಾರಿಸಿದ್ದು, ಗುಂಡು ಮಹಿಳೆಯ ಹೊಟ್ಟೆಗೆ ಹೊಕ್ಕಿವೆ. ತಕ್ಷಣ ಸ್ಥಳೀಯರು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಹಾಡಹಗಲೇ ನಡೆದ ಈ ದಾಳಿಯಿಂದ ವಕೀಲರು ಸೇರಿದಂತೆ ಸ್ಥಳದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.