Home ಟಾಪ್ ಸುದ್ದಿಗಳು ಶ್ರೀರಾಮ ಸೇನೆ ಮುಖಂಡರ ಮೇಲೆ ಗುಂಡಿನ ದಾಳಿ| ಮೂವರ ಬಂಧನ

ಶ್ರೀರಾಮ ಸೇನೆ ಮುಖಂಡರ ಮೇಲೆ ಗುಂಡಿನ ದಾಳಿ| ಮೂವರ ಬಂಧನ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದ ಬಳಿ ಶ್ರೀರಾಮ ಸೇನೆ ಮುಖಂಡರ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪಾಟೀಲ ಮಾಳದ ನಿವಾಸಿ ಅಭಿಜಿತ ಸೋಮನಾಥ ಭಾತಖಾಂಡೆ(41), ತಾಲ್ಲೂಕಿನ ಬಸ್ತವಾಡದ ರಾಹುಲ್ ನಿಂಗಾಣಿ ಕೊಡಚವಾಡ(32),  ಜ್ಯೋತಿಬಾ ಗಂಗಾರಾಮ ಮುತಗೇಕರ್(25) ಎಂದು ಗುರುತಿಸಲಾಗಿದೆ.

ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್‌ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್‌ ಮೇಲೆ ನಡೆದ ಗುಂಡಿನ ದಾಳಿ ನಡೆದಿತ್ತು.

ವೈಯಕ್ತಿಕ ಧ್ವೇಷವೇ ಗುಂಡಿನ ದಾಳಿಗೆ ಕಾರಣ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಅಭಿಜಿತ ಹಾಗೂ ರವಿ ಮಧ್ಯೆ ರಿಯಲ್ ಎಸ್ಟೇಟ್ ವ್ಯವಹಾರವಿತ್ತು.

2020ರ ಜನವರಿಯಲ್ಲಿ ಅಭಿಜಿತ ಮೇಲೆ‌ ಮಾರಣಾಂತಿಕ ಹಲ್ಲೆ ನಡೆದಿತ್ತು. ಈ ಪ್ರಕರಣದಲ್ಲಿ ಕೋಕಿತ್ಕರ್ ಮೊದಲ ಆರೋಪಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version