ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಮೊದಲ ಅಪಘಾತ: ಮೂವರಿಗೆ ಗಾಯ

Prasthutha|

ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರ ಗಾಯಗೊಂಡಿರುವ ಘಟನೆ ಹರೇಕಳ- ಅಡ್ಯಾರ್ ನೂತನ ಸೇತುವೆಯಲ್ಲಿ ನಡೆದಿದೆ.

- Advertisement -

ಹರೇಕಳ-ಅಡ್ಯಾರ್ ಸಂಪರ್ಕಿಸುವ ಸೇತುವೆಯಲ್ಲಿ ಸಂಭವಿಸಿದ ಮೊದಲ ಅಪಘಾತ ಇದಾಗಿದೆ. ಅಡ್ಯಾರ್ ಕಡೆಯಿಂದ ಹರೇಕಳ ಬರುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಆಲ್ಟೋ ಕಾರು ಹಾಗೂ ಎದುರಿನಿಂದ ಬಂದ ಇಕೋ ಸ್ಪೋರ್ಟ್ಸ್ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ.


ಕಾರಿನಲ್ಲಿದ್ದ ಮಹಿಳೆ, ಸಹಪ್ರಯಾಣಿಕೆ ಹಾಗೂ ಇನ್ನೊಂದು ಕಾರಿನಲ್ಲಿದ್ದ ಚಾಲಕ ಗಾಯಗೊಂಡಿದ್ದಾರೆ.

Join Whatsapp
Exit mobile version