ರಸ್ತೆ ಅಪಘಾತ: ತಹಶೀಲ್ದಾರ್‌ ರಿಂದ ವೈದ್ಯೆಗೆ ಪ್ರಥಮ ಚಿಕಿತ್ಸೆ

Prasthutha: January 2, 2022

ಚಿಂಚೋಳಿ: ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವೈದ್ಯಾಧಿಕಾರಿ ಮತ್ತು ಅವರ ತಂದೆಗೆ ತಹಶೀಲ್ದಾರ್ ಒಬ್ಬರು ಪ್ರಥಮ ಚಿಕಿತ್ಸೆ ನೀಡಿ ನೆರವಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಳಿ ನಡೆದಿದೆ.

ಗಡಿಕೇಶ್ವಾರ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಝೀಬಾ ಹಾಗೂ ಅವರ ತಂದೆ ಜಹೀರ್‌ ಅಹ್ಮದ್‌ ದ್ವಿಚಕ್ರ ವಾಹನದಿಂದ ಬಿದ್ದು ಗಾಯಗೊಂಡಿದ್ದನ್ನು ಗಮನಿಸಿದ ತಹಶೀಲ್ದಾರ್‌ ಅಂಜುಮ್‌ ತಬಸುಮ್‌ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದರು.

ಅಲ್ಲದೆ ತಮ್ಮ ವಾಹನದಲ್ಲಿಯೇ ಕರೆದುಕೊಂಡು ಹೋಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

ತಹಶೀಲ್ದಾರ್‌ ತಬಸುಮ್‌ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!