Home ಟಾಪ್ ಸುದ್ದಿಗಳು ಮೊದಲು ಮೋದಿ, ಕುಮಾರಸ್ವಾಮಿ, ಸೀತಾರಾಮನ್ ರಾಜೀನಾಮೆ ಕೇಳಿ: ಲಕ್ಷ್ಮಿ ಹೆಬ್ಬಾಳಕರ್ ಕಿಡಿ

ಮೊದಲು ಮೋದಿ, ಕುಮಾರಸ್ವಾಮಿ, ಸೀತಾರಾಮನ್ ರಾಜೀನಾಮೆ ಕೇಳಿ: ಲಕ್ಷ್ಮಿ ಹೆಬ್ಬಾಳಕರ್ ಕಿಡಿ

ಬೆಳಗಾವಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಒತ್ತಾಯಿಸುತ್ತಿರುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.


ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣಾ ಬಾಂಡ್ ನ ₹6 ಸಾವಿರ ಕೋಟಿ ಹಗರಣದಲ್ಲಿ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಆದೇಶಿಸಿದೆ. ಬಿಜೆಪಿ ಸರ್ಕಾರದವರು ಮೊದಲು ಸುಪ್ರೀಂಕೋರ್ಟ್ ಆದೇಶ ಪಾಲಿಸಿ ಹಣಕಾಸು ಸಚಿವರ ರಾಜೀನಾಮೆ ಪಡೆಯಲಿ. ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಲಿ. ನಂತರ ಸಿದ್ದರಾಮಯ್ಯ ರಾಜೀನಾಮೆ ಕೇಳಲಿ’ ಎಂದರು.


ಸಿದ್ದರಾಮಯ್ಯ ಸಿ.ಎಂ ಸ್ಥಾನದಲ್ಲಿ ಮುಂದುವರಿದರೆ, ಮುಡಾ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯುವುದಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ಆಗಿಲ್ಲ ಎಂಬುದು ಅಷ್ಟೇ ಸತ್ಯ. ಮಾಧ್ಯಮಗಳೂ ಈ ಸಂಗತಿಯನ್ನು ಮರೆಯಬಾರದು’ ಎಂದು ಮನವಿ ಮಾಡಿದರು.

Join Whatsapp
Exit mobile version