ಶಿವಮೊಗ್ಗದಲ್ಲಿ ಝಿಕಾ ವೈರಸ್’ಗೆ ಮೊದಲ ಬಲಿ

Prasthutha|

►ಬೆಂಗಳೂರಿನಲ್ಲಿ ಡೆಂಘೀಗೆ ಬಾಲಕ

- Advertisement -


ಶಿವಮೊಗ್ಗ: ಗಾಂಧಿ ನಗರದ ಮನೆಯಲ್ಲಿ ಝೀಕಾ ವೈರಸ್ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ.


ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ವೃದ್ಧನಲ್ಲಿ ಜೂನ್ 21ರಂದು ಝೀಕಾ ವೈರಸ್ ಇರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಡಿಸ್ಚಾರ್ಜ್ ಮಾಡಲಾಗಿತ್ತು. ಗುರುವಾರ ಕುಟುಂಬದವರು ವೃದ್ಧನನ್ನು ಮನೆಗೆ ಕರೆದೊಯ್ದಿದ್ದರು. ಆದರೆ ನಿನ್ನೆ ಮನೆಯಲ್ಲಿ ವೃದ್ಧ ಮೃತಪಟ್ಟಿದ್ದಾರೆ.

- Advertisement -


ರಾಜ್ಯದಲ್ಲಿ ಡೆಂಘೀ ಸೋಂಕು ಉಲ್ಭಣಗೊಂಡಿದೆ. ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.



Join Whatsapp