ರಾಜ್ಯದಲ್ಲಿ ಮೊದಲ ಡೆಲ್ಟಾ ಪ್ಲಸ್‌ ಸೋಂಕು ಮೈಸೂರಿನಲ್ಲಿ ಪತ್ತೆ | ಸಚಿವ ಸುಧಾಕರ್‌

Prasthutha|

ಕೊರೊನಾ ಮಹಾಮಾರಿ  ಸೋಂಕು ಬೆನ್ನಲ್ಲೇ ಕರ್ನಾಟಕಕ್ಕೆ ಡೆಲ್ಟಾ ವೈರಸ್‌‌ ಸೋಂಕು ಕಾಲಿಟ್ಟಿದೆ” ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿದ್ದಾರೆ.

- Advertisement -

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಮೈಸೂರಿನಲ್ಲಿ ಓರ್ವರಿಗೆ ಡೆಲ್ಟಾ ವೈರಸ್‌‌ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕ್ಕಕೆ ಮೊದಲ ಡೆಲ್ಟಾ ಪ್ಲಸ್‌ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.

ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಒಬ್ಬರಿಗೆ ಡೆಲ್ಟಾ ಪ್ಲಸ್‌ ಪತ್ತೆಯಾಗಿತ್ತು ಎಂದು ವರದಿಯಾಗಿತ್ತು. ಆದರೆ, ಈ ಬಗ್ಗೆ ನಿನ್ನೆ ಆರೋಗ್ಯ ಇಲಾಖೆ ಖಚಿತಪಡಿಸಿರಲಿಲ್ಲ. ಇದೀಗ ಮೈಸೂರಿನಲ್ಲಿ ಡೆಲ್ಟಾ ಪ್ಲಸ್‌ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌‌ ಖಚಿತಪಡಿಸಿದ್ದಾರೆ



Join Whatsapp